ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಚಳಿಯಿದ್ದು, ಮನೆಯಿಂದ ಹೊರಗೆ ಬರುವುದೇ ಕಷ್ಟವಾಗಿದೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಳೆದ 10 ವರ್ಷಗಳಲ್ಲಿ ನವೆಂಬರ್‌ನಲ್ಲಿ ದಾಖಲಾದ ಕನಿಷ್ಠ ತಾಪಮಾನವಿದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ 10 ಗಂಟೆ ಕೂಡ, ಬೆಳಗಿನ ಜಾವ ಐದಾರು ಗಂಟೆ ರೀತಿ ಕಾಣುತ್ತಿದ್ದು, ಜನ ಬಿಸಿಲಿಗಾಗಿ ಎದುರು ನೋಡುವಂತಾಗಿದೆ. ಚಳಿ ಜೊತೆಗೆ ಚಳಿಗಾಳಿಯ ಪ್ರಮಾಣವೂ ಹೆಚ್ಚುತ್ತಿದ್ದು, ಸೂಟ್‌ಕೇಸ್ ಸೇರಿದ್ದ ಚಳಿಗಾಲದ ಬಟ್ಟೆಗಳೆಲ್ಲವೂ ಹೊರಬಂದಿವೆ. ಇದರ ಜೊತೆಗೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ನಿರೀಕ್ಷೆಯೂ ಇದೆ.