ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಇದರಿಂದ ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂ ಕುಸಿತವಾಗಿದೆ.
ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ. ಪ್ರಯಾಣಿಕರು ರೈಲು ಸಂಚಾರ ಇಲ್ಲದ ಕಾರಣ ಬಸ್‌ಗಳಲ್ಲಿ ತೆರಳಿದ್ದಾರೆ.
ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್ ಮಾಡಲಾಗಿದೆ. ಆಲೂರು-ಹಾಸನ ಮಾರ್ಗದ ರೈಲು ಸಂಚಾರವೂ ಸ್ಥಗಿತಗೊಂಡಿದೆ.
ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಪರದಾಡಿದರು. ಸಾವಿರಾರು ಪ್ರಯಾಣಿಕರು ಬೆಳಗಿನ ಜಾವದವರೆಗೆ ರೈಲಿನಲ್ಲೇ ಕಳೆದರು. ಬೆಳಗ್ಗೆ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ವಾಹನಗಳ ವ್ಯವಸ್ಥೆ ಮಾಡಿದೆ.