ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗನ ಸಾವು ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೆಟ್ರೋ ಪಿಲ್ಲರ್‌ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಘಟನೆ ಕಳೆದ ಐದು ತಿಂಗಳ ಹಿಂದೆ ನಡೆದಿತ್ತು. ಇದೀಗ ಪೊಲೀಸರು ಸುಮಾರು 1100 ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ನಿರ್ಮಾಣ ಕಂಪನಿಯ ಇಂಜಿನಿಯರ್ಸ್ ಹಾಗೂ ಬಿಎಂಆರ್​ಸಿಎಲ್ ಇಂಜಿನಿಯರ್ಸ್ ಸೇರಿ 11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್ಎಸ್ಎಲ್ ರಿಪೋರ್ಟ್ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಐಐಟಿ ರಿಪೋರ್ಟ್ ಮತ್ತು ಎಫ್ಎಸ್ಎಲ್ ರಿಪೋರ್ಟ್ ಚಾರ್ಜ್ ಶೀಟ್​ನಲ್ಲಿ ಸೇರಿಸಿದ್ದಾರೆ. ಅಲ್ಲದೆ, ಅಧಿಕಾರಿಗಳ ಲೋಪ ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ.

ತನಿಖೆಯ ವೇಳೆ ಪ್ರಾಜೆಕ್ಟ್ ಡಾಕ್ಯುಮೆಂಟ್​ಗಳನ್ನ ಪರಿಶೀಲನೆ ನಡೆಸಿದ ಪೊಲೀಸರು, ಪಿಲ್ಲರ್ ಡಿಸೈನ್ ಹೇಗೆ ಮಾಡಲಾಗಿತ್ತು? ಸುರಕ್ಷತೆಗೆ ಏನೆಲ್ಲಾ ಕ್ರಮ ಕೈಗೊಳ್ಳಬೇಕಿತ್ತು, ಲೋಪ ಯಾರದ್ದು? ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಅಲ್ಲದೆ ಘಟನೆ ಬಗ್ಗೆ ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್ಎಸ್ಎಲ್ ರಿಪೋರ್ಟ್ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!