Wednesday, June 29, 2022

Latest Posts

ನಾಗವಾರ-ಗೊಟ್ಟಿಗೆರೆ ಮೆಟ್ರೋ ನಿರ್ಮಾಣ ಕಾರ್ಯ: 577 ಮರ ಕಡಿಯಲು ಹೈಕೋರ್ಟ್‌ ಅನುಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿಲಿಕಾನ್‌ ಸಿಟಿ ಬೆಂಗಳೂರಿನ ನಾಗವಾರ-ಗೊಟ್ಟಿಗೆರೆ ಮೆಟ್ರೋ ನಿರ್ಮಾಣಕ್ಕಾಗಿ ಬರೋಬ್ಬರಿ 577 ಮರಗಳನ್ನು ಕಡಿಯಲು ಹೈ ಕೋರ್ಟ್‌ ಅನುಮತಿ ನೀಡಿದೆ.
ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಅನುಕೂಲವಾಗುವಂತೆ ಈಗಾಗಲೇ ಮೂರನೇ ಹಂತದ ಯೋಜನೆ ಕಾರ್ಯ ರೂಪಕ್ಕೆ ತರಲಾಗಿದೆ. ಈ ಯೋಜನೆಯಲ್ಲಿ 42 ಕಿ.ಮೀ ಉದ್ದದ ಮಾರ್ಗ ನಿರ್ಮಾಣವಾಗಲಿದೆ.
ಕಾಮಗಾರಿ ವಿಳಂಬದಿಂದ ಪ್ರತಿದಿನ 2 ಕೋಟಿ ರೂ. ನಷ್ಟ ಅನುಭವಿಸುತ್ತಿದ್ದ ನಿಗಮಕ್ಕೆ ದೊಡ್ಡ ರಿಲೀಫ್‌ ಸಿಕ್ಕಂತಾಗಿದೆ. ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬೆಂಗಳೂರು ಎನ್ವಿರಾನ್ಮೆಂಟ್‌ ಟ್ರಸ್ಟ್‌ ಮತ್ತು ಪರಿಸರವಾದಿ ಟಿ.ದತ್ತಾತ್ರೇಯ ದೇವರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈ ಕೋರ್ಟ್‌ ನ ಸಿಜೆ ರಿತುರಾಜ್‌ ಅವಸ್ಥೆ ಅವರ ವಿಭಾಗೀಯ ನ್ಯಾಯಪೀಠ ಕೈಗೆತ್ತಿಕೊಂಡಿತ್ತು. ತಜ್ಞರ ಸಲಹೆ ಮೇರೆಗೆ ಬಿಎಂಆರ್ ಸಿಎಲ್‌ 577 ಮರಗಳನ್ನು ಕತ್ತರಿಸುವುದಕ್ಕೆ ಅನುಮತಿ ನೀಡಲಾಗಿದ್ದು, ಈ ಪೈಕಿ 212 ಮರಗಳನ್ನು ಸ್ಥಳಾಂತರಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss