ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ರೀ ರೈಲು ಹಳಿ ತಪ್ಪಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ.
ರಾಜಾಜಿನಗರದ ಮೆಟ್ರೊ ನಿಲ್ದಾಣದ ಸಮೀಪ ಹಳಿ ತಪ್ಪಿದ ಪರಿಣಾಮ, ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿದೆ. ಇದರಿಂದಾಗಿ ಪ್ರಯಾಣಿಕರು ತೊಂದರೆಗೀಡಾಗಿದ್ದಾರೆ.
ರೀ ರೈಲ್ ಅನ್ನು ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಮಧ್ಯಾಹ್ನದವರೆಗೂ ಇದೇ ಸ್ಥಿತಿ ಇರಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ತನಕ ಮಾತ್ರ ಮೆಟ್ರೊ ಸಂಚರಿಸಲಿದೆ.