ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ: ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಆ. 21ರಂದು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೆದ್ದಾರಿ ಬಂದ್​​ ಮಾಡಿ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿತ್ತು. ಆದರೆ ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ . ಮಂಡ್ಯದ ಸಂಜಯ್ ಸರ್ಕಲ್​ನಲ್ಲಿ ಪ್ರತಿಭಟನೆ ಇದೆ ಎಂದು ‘x’ ​ ಮಾಡುವ ಮೂಲಕ ಬಿಜೆಪಿ ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಕಾವೇರಿ ನೀರಿನ ವಿಚಾರವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ, ಆಗಸ್ಟ್​ 21 ರಂದು ಮಂಡ್ಯದ ಇಂಡುವಾಳು ಬಳಿ ಬೃಹತ್​ ಹೋರಾಟಕ್ಕೆ ಸಜ್ಜಾಗಿದೆ. ಈ ಬಗ್ಗೆ ನಿನ್ನೆ ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಚರ್ಚೆ ನಡೆಸಲಾಗಿದೆ. ಇನ್ನೂ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪರಿಗೂ ಆಹ್ವಾನ ನೀಡಿದ್ದು, ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!