Saturday, December 20, 2025

ಬೆಂಗಳೂರು ಮಂದಿ ಇತ್ತ ನೋಡಿ: ಭಾನುವಾರ ಹಳದಿ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರೇ ಗಮನಿಸಿ, ಈ ಭಾನುವಾರ (ಡಿ 21) ಮೆಟ್ರೋ ಸಂಚಾರದ ವೇಳಾಪಟ್ಟಿಯಲ್ಲಿ ಸಣ್ಣ ಬದಲಾವಣೆ ಇರಲಿದೆ.

ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ, ಭಾನುವಾರ ಬೆಳಿಗ್ಗೆ ಎಂದಿನಂತೆ 7 ಗಂಟೆಗೆ ರೈಲು ಸಂಚಾರ ಆರಂಭವಾಗುವ ಬದಲು, ಒಂದು ಗಂಟೆ ತಡವಾಗಿ ಅಂದರೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಆದರೆ, ಹಸಿರು ಮತ್ತು ನೇರಳೆ ಮಾರ್ಗಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

error: Content is protected !!