ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್: ಜೂ.30ರ ವರೆಗೆ ಶೇ.5ರಷ್ಟು ರಿಯಾಯಿತಿ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ಶೇ. 5 ರಷ್ಟು ರಿಯಾಯಿತಿ ನೀಡುವ ಕುರಿತು ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಆದೇಶದ ಮೇರೆಗೆ ಇದೇ ತಿಂಗಳ ಜೂನ್ ಅಂತ್ಯದ ಅವಧಿವರೆಗೆ ಪಾವತಿಸುವ ಆಸ್ತಿ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿ ಅವಧಿ ವಿಸ್ತರಿಸಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀಸಾಗರ್ ಎನ್.ಕೆ ಅಧಿಸೂಚನೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಪಾಲಿಕೆಯ ಆರ್ಥಿಕ ಹಿತದೃಷ್ಠಿಯಿಂದ 2023-24ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5ರಷ್ಟು ರಿಯಾಯಿತಿ ಅವಧಿಯನ್ನು ದಿನಾಂಕ 30-06-2023ರವರೆಗೆ ವಿಸ್ತರಿಸಿ ಆದೇಶ ನೀಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!