ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಕಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿತ್ತು.
ಈ ಘಟನಾ ಸ್ಥಳದಲ್ಲಿ ಪೊಲೀಸರು, ಶ್ವಾನದಳ, ಎಫ್‌ಎಸ್‌ಎಲ್ ತಂಡದಿಂತ ಪರಿಶೀಲನೆ, ತನಿಖೆ ನಡೆಸಲಾಗುತ್ತಿದೆ. ಇದೀಗ ತನಿಖೆಯ ವೇಳೆಯಲ್ಲಿ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.