Tuesday, December 16, 2025

ಬೆಂಗಳೂರಿಗರಿಗೆ ಚಳಿ+ಮಳೆ ಅನುಭವ! ಬೇರೆ ಜಿಲ್ಲೆಗಳಲ್ಲಿ ಯಾವ ವೆದರ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಚಳಿ ಬಿಟ್ಟು ಬಿಡದೆ ಕಾಡುತ್ತಿದೆ.

ಇಂದು ಸಹ ಚಳಿ ಮುಂದುವರಿಯಲಿದೆ. ಚಳಿ ಜೊತೆ ಬೆಂಗಳೂರಿನ ಅಲ್ಲಲ್ಲಿ ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

error: Content is protected !!