ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಂಠೀರವ ಜಿಐಎಸ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.14ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಮಾವಳ್ಳಿ, ಚಿಕ್ಕಮಾವಳ್ಳಿ, ಎಸ್.ಆರ್.ನಗರ, ಪ್ಯೂರ್‌ಫಾರ್ಮ, ಲಾಲ್‌ಬಾಗ್ ಡಬ್ಬಲ್ ರೋಡ್, ಸುಧಾಮನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.14ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಗೋಕುಲ ಎಂಯುಎಸ್‌ಎಸ್, ಡಿ.ಬಿ ಸಂದ್ರಾ 4ನೇ ಬ್ಲಾಕ್, ಜೆ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, ಬಾಹುಬಲಿ ನಗರ, ಡಿ.ಬಿ.ಸಂದ್ರ 4ನೇ ಬ್ಲಾಕ್, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗಾರ್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, ಎಚ್‌ಎಂಟಿ ಇಂಡಸ್ಟ್ರಿಯಲ್ ಎಸ್ಟೇಟ್, ಪ್ರೆಸ್ಟೀಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪಾರ‍್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ. ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟಿಎನ್, HMR ಲೇಔಟ್ MRTDC, ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



