Wednesday, December 17, 2025

ಬೆಂಗಳೂರು ದರೋಡೆ ಕೇಸ್‌: ಚೆನ್ನೈನಲ್ಲಿ ಆರೋಪಿಗಳು ಅರೆಸ್ಟ್‌ 6.3 ಕೋಟಿ ರೂ. ಹಣ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಹಣ, ಆರೋಪಿಗಳ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.

ದರೋಡೆಕೋರರ ಬೆನ್ನಟ್ಟಿದ್ದ ಪೊಲೀಸರು ಚಿತ್ತೂರಿನಲ್ಲಿ ಇನ್ನೋವಾ ಕಾರನ್ನು ವಶಕ್ಕೆ ಪಡೆದಿದ್ದರು. ದರೋಡೆಕೋರರು ಈ ಕಾರನ್ನು ಕೃತ್ಯಕ್ಕೆ ಬಳಸಿದ್ದರು. ಕಾರು ವಶಕ್ಕೆ ಪಡೆದು ಬೆಂಗಳೂರಿಗೆ ತಂದು ಪರಿಶೀಲನೆ ನಡೆಸಿದ್ದರು. ಯುಪಿ ನೋಂದಣಿಯ ನಂಬರ್ ಪ್ಲೇಟ್ ಅಳವಡಿಸಿ ಗ್ಯಾಂಗ್ ಪರಾರಿಯಾಗಿತ್ತು.‌

ದರೋಡೆಕೋರರಿಗೆ ಇನ್ನೋವಾ ಕಾರು ಕೊಟ್ಟಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರು ಗುಡಿಪಲ್ಲಿ ಬಳಿ ಪತ್ತೆಯಾಗಿದ್ದ ಕಾರು ಎಂಜಿನ್‌ನ ಚಾರ್ಸಿ ನಂಬರ್ ಆಧರಿಸಿ ಇಬ್ಬರನ್ನ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

error: Content is protected !!