ಹೊಸದಿಗಂತ ಡಿಜಿಟಲ್ ಡೆಸ್ಕ್:
ತಂದೆಯೇ ಮಗನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ಘಟನೆ ನಡೆದಿದೆ. ರಾಜೇಶ್ ತಂದೆಯಿಂದಲೇ ಕೊಲೆಯಾದ ಮಗ. ತಂದೆ ಲಿಂಗಪ್ಪ ಮಗನ ಕೈಕಾಲು ಕಟ್ಟಿ, ಹಲ್ಲೆ ನಡೆಸಿ ಕೊಲೆಗೈದಿದ್ದಾರೆ.
ರಾಜೇಶ್ ಕುಡಿದು ಬಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ. ಮಗನ ಕಿರುಕುಳ ಸಹಿಸಲಾಗದೇ ಲಿಂಗಪ್ಪ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.