ಬೆಂಗಳೂರು ಕಾಲ್ತುಳಿತ: ಸಂತ್ರಸ್ತರ ಕುಟುಂಬದವರಿಗೆ 1 ತಿಂಗಳ ವೇತನ ನೀಡಲು ಮುಂದಾದ ಬಿಜೆಪಿ ಶಾಸಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೆರವಾಗಲು ಪ್ರತಿಪಕ್ಷ ಬಿಜೆಪಿ ಶಾಸಕರು ನಿರ್ಧರಿಸಿದ್ದು, ಬಿಜೆಪಿಯ ಎಲ್ಲ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ಸಂತ್ರಸ್ತರ ಕುಟುಂಬಗಳಿಗೆ ನೀಡಲು ಮುಂದಾಗಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಸದಸ್ಯರು ಭಾನುವಾರ ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು, ಈಗ ಸರ್ಕಾರ ಘೋಷಿಸಿರುವ ಪರಿಹಾರ ಯಾವುದಕ್ಕೂ ಸಾಲದು. ಸರ್ಕಾರ ಪಾಪರ್‌ ಆಗಿಲ್ಲ ಎಂದಾದರೆ ತಲಾ ಒಂದು ಕೋಟಿ ರು. ಪರಿಹಾರ ನೀಡಬೇಕು. ನಾವು ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಬಿಜೆಪಿ ಸದಸ್ಯರು ನಮ್ಮ ಒಂದು ತಿಂಗಳ ಸಂಬಳವನ್ನು ಸಂತ್ರಸ್ತರ ಕುಟುಂಬಕ್ಕೆ ನೀಡುತ್ತೇವೆ ಎಂದು ಹೇಳಿದರು.

ಪೊಲೀಸರ ಸಲಹೆಯ ಹೊರತಾಗಿಯೂ, ಸರ್ಕಾರ ಅದನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ನಾಯಕರು ಕಾನೂನನ್ನು ಉಲ್ಲಂಘಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅಧಿಕಾರ ಹೋರಾಟದಲ್ಲಿ ತೊಡಗಿಲ್ಲದಿದ್ದರೆ, ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ.

ಸಂತ್ರಸ್ತ ಕುಟುಂಬಗಳನ್ನು ಸಮಾಧಾನಪಡಿಸುವ ಬದಲು, ಕಪ್‍ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಅನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕರು ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!