ಹೊಸ ದಿಗಂತ ಡಿಜಿಟಲ್‌ಡೆಸ್ಕ್:
ಆರ್‌ಸಿಬಿ ವಿಜಯೋತ್ಸವ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣದ ಕುರಿತು ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರರಾವ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅರ್ಜಿಗಳು ವಿಚಾರಣೆಗೆ ಬಂದವು. ಸರ್ಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಈ ವರದಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡುವಂತೆ ಕೋರಿದರು. ಆದರೆ ಅದಕ್ಕೆ ಒಪ್ಪದ ನ್ಯಾಯಾಲಯ ಗುರುವಾರಕ್ಕೆ ವಿಚಾರಣೆಯನ್ನು ಮುಂದೂಡಿತಲ್ಲದೆ ಅದಕ್ಕೂ ಮುನ್ನ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತು.
ಮೃತಪಟ್ಟವರ ಪರವಾಗಿ ಕೂಡಾ ಹೈಕೋರ್ಟ್ ನಲ್ಲಿ ಹಲವು ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಸರ್ಕಾರ ವರದಿ ಸಲ್ಲಿಸಿದ ನಂತರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ