ಬೆಂಗಳೂರು ಕಾಲ್ತುಳಿತ ಪ್ರಕರಣ: RCB, ಕೆಎಸ್‌ಸಿಎ, ಡಿಎನ್‌ಎಗೆ ಹೈಕೋರ್ಟ್​ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ವಿಭಾಗೀಯ ಪೀಠ ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಇಂದು ನಡೆಸಿತು. ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಕೆ ಮಾಡಿತು.

ಹೈಕೋರ್ಟ್​ ಸರ್ಕಾರದ ವಾದ ಕೇಳಿದ ಬಳಿಕ ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!