ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಅವರು ತಮ್ಮ 15ನೇ ಬಜೆಟ್ ಮಂಡಿಸಿ ನಗರಾಭಿವೃದ್ಧಿ ಯೋಜನೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದೇ ವೇಳೆ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಲಾಗಿದ್ದು, 2024-25ನೇ ಸಾಲಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆಯಾಗದಂತೆ ತಡೆಯಲು ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಸಾವಿರ ಕೋಟಿ ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ.

ಈ ಮೂಲಕ ನಗರಾಭಿವೃದ್ಧಿಯನ್ನು ಹೇಗೆ ಅಭಿವೃದ್ಧಿಗೊಳ್ಳುತ್ತದೆ ಎಂಬುದನ್ನೂ ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಬಜೆಟ್‌ ಮಂಡನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ಅಭಿವೃದ್ಧಿಪಡಿಸಲು ಬೆಂಗಳೂರು ಬ್ರ್ಯಾಂಡ್ ಪರಿಕಲ್ಪನೆಯನ್ನು ರೂಪಿಸಿ ಜಾರಿಗೆ ತಂದಿದ್ದೇನೆ ಎಂದು ಹೇಳಿದರು.

ಜನರ ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆಗಳನ್ನು ಮಾಡಲು ನಾವು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!