ಬೆಂಗಳೂರಿನ ಮಹಿಳೆಯ ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ ತಂಡ ರವಾನೆ ಎಂದ ಸಚಿವ ಪರಮೇಶ್ವರ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರಿನ ವೈಯಾಲಿಕಾವಲ್ ನ ಮಹಿಳೆಯ ಬರ್ಬರವಾಗಿ ಹತ್ಯೆ ಮಾಡಿ 50 ತುಂಡುಗಳಾಗಿ ಕತ್ತರಿಸಿ ಫ್ರೀಡ್ಜ್ ನಲ್ಲಿಟ್ಟ ಆರೋಪಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ಹತ್ಯೆಯ ನಂತರ ಆರೋಪಿ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಭೇದಿಸಲು ರಚಿಸಲಾದ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ಈ ಹತ್ಯೆಯು ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದರಿಂದ ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈಗಾಗಲೇ ಪೊಲೀಸರು ಆರೋಪಿ ಒಡಿಶಾದಲ್ಲಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ ಮತ್ತು ಮೂರ್ನಾಲ್ಕು ಪೊಲೀಸ್ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ಆರೋಪಿ ತಾನು ಇರುವ ಸ್ಥಳಗಳನ್ನು ಬದಲಾಯಿಸುತ್ತಿದ್ದಾನೆ ಎಂದು ಹೇಳಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಎರಡು-ಮೂರು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಲಭ್ಯವಿರುವ ಸಾಕ್ಷ್ಯ ಮತ್ತು ಮಾಹಿತಿಯ ಆಧಾರದ ಮೇಲೆ ಒಡಿಶಾದಲ್ಲಿರುವ ಆರೋಪಿ ಈ ಕೃತ್ಯ ಎಸಗಿರುವ ಅನುಮಾನವಿದೆ. ಹೀಗಾಗಿ ಆತನನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!