ಬೆಂಗಳೂರು: ಫ್ಲೈಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏರ್‌ಪೋರ್ಟ್ ರೋಡ್‌ನ ಮಾಲ್ ಆಫ್ ಏಷ್ಯಾ ಮುಂಭಾಗದ ಫ್ಲೈಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮುನಿರಾಜ್ (22) ಮೃತ ಯುವಕ. ಭಾನುವಾರ ರಾತ್ರಿ 12:30ರ ಸುಮಾರಿಗೆ ಈ ಘಟನೆ ನಡೆದಿದೆ. ತಾಯಿಗೆ ಸ್ನೇಹಿತರನ್ನು ಭೇಟಿಯಾಗಿ ಬರುತ್ತೇನೆಂದು ಹೇಳಿ ಹೊರಟಿದ್ದ ಈತ ಫ್ಲೈಓವರ್ ಮೇಲೆ ಬೈಕ್ ನಿಲ್ಲಿಸಿ ಬಳಿಕ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಉಂಟಾಗಿದೆ.

ಈ ಕುರಿತು ಪೊಲೀಸರು ಹೆದ್ದಾರಿಯ ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದು, ಸಾವನ್ನಪ್ಪಿದ್ದು ಹೇಗೆ ಎಂದು ತನಿಖೆಯಲ್ಲಿ ಹೊರಬರಬೇಕಿದೆ. ಸದ್ಯ ಘಟನೆ ಸಂಬಂಧ ಕೊಡಿಗೆಹಳ್ಳಿ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!