ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ರಾಜ್ಯದ ಜನತೆಯನ್ನು ಕಾಡುತ್ತಿದ್ದ ವಾಯುಮಾಲಿನ್ಯದ ಪ್ರಮಾಣದಲ್ಲಿ ಇಂದು ಸಣ್ಣ ಮಟ್ಟದ ಚೇತರಿಕೆ ಕಂಡುಬಂದಿದೆ. ಆದರೆ, ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಇನ್ನೂ ಅಪಾಯಕಾರಿ ಮಟ್ಟದಲ್ಲೇ ಇರುವುದು ಕಳವಳಕಾರಿ ಸಂಗತಿಯಾಗಿದೆ.
ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕ 158 ದಾಖಲಾಗಿದೆ. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಅಂಕಿ-ಅಂಶಗಳಲ್ಲಿ ಸಣ್ಣ ಬದಲಾವಣೆ ಕಂಡಿದ್ದರೂ, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ಪ್ರಕಾರ ಇದು ಆರೋಗ್ಯಕ್ಕೆ ಹಾನಿಕರವಾಗಿದೆ.
ಹುಬ್ಬಳ್ಳಿ ಮತ್ತು ಬೆಳಗಾವಿ ಸೇರಿದಂತೆ ಹಲವೆಡೆ AQI 100ಕ್ಕಿಂತ ಕಡಿಮೆ ದಾಖಲಾಗಿದ್ದು, ಇಲ್ಲಿನ ಗಾಳಿಯ ಗುಣಮಟ್ಟ ಉತ್ತಮವಾಗಿದೆ.
ಕಲಬುರ್ಗಿ ಮತ್ತು ಬಳ್ಳಾರಿಯಲ್ಲಿ ಮಾಲಿನ್ಯದ ಮಟ್ಟ 150ರ ಗಡಿ ದಾಟಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಮಂಗಳೂರಿನಲ್ಲಿ ಕಳೆದ ದಿನಗಳಿಗಿಂತ ಇಂದು ವಾಯು ಗುಣಮಟ್ಟದಲ್ಲಿ ತುಸು ಸುಧಾರಣೆ ಕಂಡುಬಂದಿದೆ.
ರಾಜ್ಯಾದ್ಯಂತ ಕೇವಲ ಮಾಲಿನ್ಯವಷ್ಟೇ ಅಲ್ಲದೆ, ಬಿಸಿಲಿನ ಬೇಗೆಯೂ ಜನರನ್ನು ಹೈರಾಣಾಗಿಸುತ್ತಿದೆ. ಹವಾಮಾನ ವರದಿಯ ಪ್ರಕಾರ, ಈ ತಿಂಗಳು ಪೂರ್ತಿ ಇದೇ ರೀತಿಯ ಒಣ ಹವೆ ಮತ್ತು ತೀವ್ರ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.



