ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ರಾಜ್ಯದ ವಾಯು ಗುಣಮಟ್ಟದಲ್ಲಿ ಸಣ್ಣಮಟ್ಟಿನ ಚೇತರಿಕೆ ಕಂಡುಬಂದಿದೆ. ದೇಶದ ಇತರ ಪ್ರಮುಖ ಮೆಟ್ರೋ ನಗರಗಳಿಗೆ ಹೋಲಿಸಿದರೆ ಸಿಲಿಕಾನ್ ಸಿಟಿ ಬೆಂಗಳೂರಿನ ಸ್ಥಿತಿ ಉತ್ತಮವಾಗಿದ್ದರೂ, ಅಪಾಯದ ಛಾಯೆ ಇನ್ನೂ ಸಂಪೂರ್ಣವಾಗಿ ಸರಿದಿಲ್ಲ.
ತೀವ್ರ ಕಳಪೆ ಮಟ್ಟದಿಂದ ಚೇತರಿಸಿಕೊಂಡಿದ್ದು, ಸದ್ಯ AQI 132 ದಾಖಲಾಗಿದೆ. ಉಡುಪಿ ಮತ್ತು ಮಂಗಳೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ.
ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ವಾಯು ಗುಣಮಟ್ಟದ ಸೂಚ್ಯಂಕ 150 ದಾಟಿದ್ದು, ಆತಂಕಕಾರಿ ಸ್ಥಿತಿಯಲ್ಲಿದೆ.
ಗಾಳಿಯ ಗುಣಮಟ್ಟದ ಅಂಕೆಗಳಲ್ಲಿ ಸಣ್ಣ ಇಳಿಕೆ ಕಂಡುಬಂದಿದ್ದರೂ, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ಪ್ರಕಾರ 132 AQI ಕೂಡ ಆರೋಗ್ಯಕ್ಕೆ ಹಾನಿಕಾರಕವೇ ಆಗಿದೆ. “ಉಸಿರಾಟಕ್ಕೆ ಮಾರಕವಾಗಿದ್ದ ಗಾಳಿ ಈಗ ಸ್ವಲ್ಪ ಸುಧಾರಿಸಿದೆ ನಿಜ, ಆದರೆ ಇದು ಇನ್ನೂ ಸಂಪೂರ್ಣವಾಗಿ ಸುರಕ್ಷಿತವಲ್ಲ” ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.



