March 22, 2026
Sunday, March 22, 2026
spot_img

ಬೆಂಗಳೂರಿಗರೇ ಗಮನಿಸಿ: ಮಹಾಶಿವರಾತ್ರಿ ಹಿನ್ನೆಲೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾಶಿವರಾತ್ರಿ ಹಬ್ಬದ ಪವಿತ್ರ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು, ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ ಮಹತ್ವದ ಆದೇಶ ಹೊರಡಿಸಿದೆ.

ಫೆಬ್ರವರಿ 15, 2026. ನಗರದಾದ್ಯಂತ ಪ್ರಾಣಿ ವಧೆ ಮಾಡುವುದು ಮತ್ತು ಯಾವುದೇ ಮಾಂಸದ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಧಾರ್ಮಿಕ ಭಾವನೆಗಳನ್ನು ಗೌರವಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಹಬ್ಬದ ದಿನದಂದು ಶಾಂತಿ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಾಗರಿಕರು ಹಾಗೂ ಮಾಂಸ ಮಾರಾಟಗಾರರು ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !