ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಜ್ಯದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದಾರೆ. ಮುಸ್ಮಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಸಾಮೂಹಿಕ ಪ್ರಾರ್ಥನೆಗೆ ಅಪಾರ ಸಂಖ್ಯೆಯಲ್ಲಿ ಸೇರುವ ಹಿನ್ನೆಲೆ ಬೆಂಗಳೂರು ಸಂಚಾರಿ ಪೊಲೀಸರು ನಗರದಲ್ಲಿ ಹಲವೆಡೆ ವಾಹನ ಸಂಚಾರ ಬದಲಾವಣೆ ಮಾಡಿದ್ದು, ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಆ ಮೂಲಕ ಜನರು ಸಹಕರಿಸುವಂತೆ ಕೋರಿದ್ದಾರೆ.
ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲರ್ಸ್ ರಸ್ತೆಯಲ್ಲಿರುವ ಖುದ್ದುಸಾಬ್ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಾರ್ಥನೆ ಸಲ್ಲಿಸುವ ಪ್ರಯುಕ್ತ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ.
- ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ಅಂಡರ್ ಬ್ರಿಡ್ಜ್ನಿಂದ ಹೇನ್ಸ್ ರಸ್ತೆ ಜಂಕ್ಷನ್‌ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
- ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್ ವರೆಗೆ ಎರಡು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
- ನಂದಿದುರ್ಗ ರಸ್ತೆ – ಬೆನ್ಸನ್ ಕ್ರಾಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ಸ್ ರಸ್ತೆ ಜಂಕ್ಷನ್‌ವರೆಗೆ (ಓಲ್ಡ್ ಹಜ್ ಕ್ಯಾಂಪ್) ಎರಡು ಬದಿಯ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.