ಬೆಂಗಳೂರಿಗರೇ ಗಮನಿಸಿ, ನಾಳೆ ಕಾವೇರಿ ವಾಟರ್‌ ಸಪ್ಲೇ ಇಲ್ವೇ ಇಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೂನ್ 19ರಂದು ಬೆಳಗ್ಗೆ 6 ರಿಂದ ಜೂನ್ 20ರ ಬೆಳಗ್ಗೆ 6 ಗಂಟೆವರೆಗೆ ನಗರದ ಬಹುತೇಕ ಭಾಗಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದ್ದು, ಮುಂಜಾಗ್ರತೆಯಾಗಿ ಕಾವೇರಿ ನೀರು ಸಂಗ್ರಹಿಸಿಕೊಳ್ಳುವಂತೆ ನಾಗರಿಕರಿಗೆ BWSSB ಮನವಿ ಮಾಡಿದೆ.

ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್‌ 19ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಬೆಂಗಳೂರಿನ ನಾಗರಿಕರಿಗೆ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!