ಮತ ಹಾಕದ ಬೆಂಗಳೂರಿಗರು ಬದುಕಿದ್ದೂ ಸತ್ತಂತೆ: ಬ್ಯಾನರ್‌ ಫೋಟೊ ವೈರಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಬೆಂಗಳೂರಿನಲ್ಲಿ ಪ್ರತಿ ಬಾರಿಯಂತೆ ಕಡಿಮೆ ಮತದಾನವಾಗಿದೆ. ಇದರಿಂದ ಆಕ್ರೋಶಗೊಂಡ ಕೆಲವರು ಮತದಾನ ಮಾಡದವರು ಬದುಕಿದ್ದು ಸತ್ತಂತೆ ಅಂತ ರಸ್ತೆ ಬದಿಗಳಲ್ಲಿ ಬ್ಯಾನರ್​ ಹಾಕಿದ್ದಾರೆ.

ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು ಎಂದು ಬ್ಯಾನರ್​ ಹಾಕಿದ್ದಾರೆ.

ಈ ಬ್ಯಾನರ್‌ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಈ ಪೋಸ್ಟರ್‌ ಹಾಕಿದ್ದು ಯಾರು ಎನ್ನುವ ಬಗ್ಗೆ ಮಾಹಿತಿ ಇಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!