ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೌತ್ ಆಫ್ರಿಕಾದಲ್ಲಿ ಕಾಣಿಸಿಕೊಂಡ ‘ಒಮಿಕ್ರಾನ್’ ರೂಪಾಂತರಿ ವೈರಸ್ ಎಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ಸೋಂಕು ಬಂದ ಇಬ್ಬರಲ್ಲಿ ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.