Thursday, February 29, 2024

ಬೆಂಗಳೂರಿನ ಪೀಣ್ಯ ಫ್ಲೈಓವರ್ ಮತ್ತೆ 4 ದಿನಗಳ ಕಾಲ ಬಂದ್!

 ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನ ಪೀಣ್ಯ ಫ್ಲೈಓವರ್ ಮತ್ತೆ 4 ದಿನಗಳ ಕಾಲ ಬಂದ್ ಆಗಲಿದೆ.

ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11 ಗಂಟೆಯವರೆಗೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು ನಾಲ್ಕು ದಿನಗಳ ಕಾಲ ನಿರ್ಬಂಧಿಸಿದೆ.

ಒಟ್ಟು ನಾಲ್ಕು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸುವಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ. 2022ರಲ್ಲಿ ಪೀಣ್ಯ ಫ್ಲೈಓವರ್ನ ಎರಡು ಪಿಲ್ಲರ್ ಗಳ ಕೇಬಲ್ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!