ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಪೂರ್ವಾಶ್ರಮದ ತಂದೆ ಕೃಷ್ಣ ಭಟ್ಟರು ನಿಧನರಾಗಿದ್ದಾರೆ.
103 ವರ್ಷದ ಕೃಷ್ಣಭಟ್ಟರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ವಿದ್ವಾಂಸರು, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃವಾದ ಕೃಷ್ಣ ಭಟ್ಟರ ನಿಧನಕ್ಕೆ ಗಣ್ಯರು ಸಂತಾಪ ಕೋರಿದ್ದಾರೆ.