ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ, ಮಾರ್ಗಸೂಚಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗಣೇಶ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಬೆಸ್ಕಾಂ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್‌ ಆಗಿದೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ಮಾರ್ಗಸೂಚಿಯಲ್ಲಿ ಏನಿದೆ?

ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.

ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.

ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.

ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.

ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.

ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!