ಬೆಸ್ಕಾಂ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ಯಾಟರಾಯನಪುರ ಕ್ಷೇತ್ರದ ರಾಜೀವ್ ಗಾಂಧಿ ನಗರದಲ್ಲಿ ಬೆಸ್ಕಾಂ ಪಿಲ್ಲರ್‌ಗೆ ಬೆಂಕಿ ತಗುಲಿ ಸ್ಫೋಟ ಸಂಭವಿಸಿ ನಾಲ್ವರು ಗಾಯಗೊಂಡಿದ್ದಾರೆ.

ವಿದ್ಯುತ್ ಕಂಬದ ಫ್ಯೂಸ್ ಹಾರಿ ಪಕ್ಕದ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ. ವಲಸೆ ಕಾರ್ಮಿಕರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ಬೆಂಕಿ ಹೊತ್ತಿಕೊಂಡಾಗ ಕಾರ್ಮಿಕರು ಅದನ್ನು ನಂದಿಸಲು ಪ್ರಯತ್ನಿಸಿದರು. ಈ ವೇಳೆ ನಾಲ್ವರಿಗೆ ಬೆಂಕಿ ತಗುಲಿದೆ.

ಈ ಘಟನೆಯಿಂದ ಕಾರ್ಮಿಕನ ಮುಖ, ಕೆನ್ನೆ ಮತ್ತು ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಎರಡು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!