Saturday, January 28, 2023

Latest Posts

`ಬೇಷರಂ ರಂಗ್’ ಹಾಡಿನ ಕಾಂಟ್ರವರ್ಸಿ: ಆಯ್ಕೆಯ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು ಎಂದ ರಮ್ಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವುಡ್ ನಟಿ ರಮ್ಯಾ ಸಾಕಷ್ಟು ಟ್ರೋಲ್‌ಗಳಿಗೆ ಒಳಗಾಗಿರುವ ಸಮಂತಾ, ರಶ್ಮಿಕಾ, ಸಾಯಿ ಪಲ್ಲವಿ, ದೀಪಿಕಾಪರ ಧ್ವನಿ ಎತ್ತಿದ್ದಾರೆ. ದೀಪಿಕಾ ಕೇಸರಿ ಬಿಕಿನಿ ವಿವಾದಕ್ಕೆ ರಮ್ಯಾ ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಇತ್ತೀಚೆಗೆ ಸಿಕ್ಕಾಪಟ್ಟೆ ಚರ್ಚೆಯಲ್ಲಿರುವ `ಪಠಾಣ್’ ಸಿನಿಮಾದ `ಬೇಷರಂ ರಂಗ್’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದಾರೆ ಎಂದು ಹಲವರ ವಿರೋಧದಕ್ಕೆ ಕಾರಣವಾಗಿತ್ತು. ಇದೀಗ ಈ ವಿಚಾರವಾಗಿ ದೀಪಿಕಾ ಪರ ರಮ್ಯಾ ನಿಂತಿದ್ದಾರೆ.

ಡಿವೋರ್ಸ್ ವಿಚಾರಕ್ಕೆ ಸಮಂತಾ ಟ್ರೋಲ್, ತಮ್ಮ ಅಭಿಪ್ರಾಯ ಹೇಳಿದ್ದಕ್ಕೆ ಸಾಯಿಪಲ್ಲವಿ, ಪ್ರೀತಿಸಿ ಬೇರೆಯಾಗಿದ್ದಕ್ಕೆ ರಶ್ಮಿಕಾ, ಬಟ್ಟೆ ವಿಚಾರಕ್ಕೆ ದೀಪಿಕಾರನ್ನು ಟ್ರೋಲ್ ಮಾಡಲಾಗಿದೆ. ಆಯ್ಕೆಯ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು ಎಂದು ರಮ್ಯಾ ಬ್ಯಾಟಿಂಗ್‌ ಮಾಡಿದ್ದಾರೆ.

ಆಯ್ಕೆಯ ಸ್ವಾತಂತ್ರ‍್ಯ ನಮ್ಮ ಮೂಲಭೂತ ಹಕ್ಕಾಗಿದೆ. ಮಹಿಳೆಯರು ತಾಯಿ ದುರ್ಗೆಯ ಮೂರ್ತರೂಪವಾಗಿದ್ದಾರೆ. ಸ್ತ್ರೀದ್ವೇಷವು ನಾವು ಹೋರಾಡಬೇಕಾದ ದುಷ್ಟತನವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!