ಕೆಎಸ್​ಆರ್​ಟಿಸಿಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು (KSRTC) ಪಡೆದುಕೊಂಡಿದೆ.

ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ (World Suatainability Congress) ನೀಡುವ 14ನೇ ಆವೃತ್ತಿಯ 18ನೇ ಪ್ರಶಸ್ತಿಯನ್ನು ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿ ಲಭಿಸಿದ್ದು,ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಡಾ. ಲತಾ ಟಿ.ಎಸ್​​ ಅವರು ಪ್ರಶಸ್ತಿ ಸ್ವೀಕರಿಸಿದರು.

ಹಳೆ ಬಸ್ಸುಗಳ ನವೀಕರಣ, ಹೊಸ ಬಸ್​ಗಳ ಖರೀದಿ, 13 ಸಾವಿರ ಸಿಬ್ಬಂದಿ ನೇಮಕದಂತಹ ನಿರ್ಧಾರದಿಂದ ಇದು ಸಾಧ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!