ಹೊಸದಿಗಂತ ವರದಿ, ಬಳ್ಳಾರಿ:
ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಫ್ತುದಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರಧಾನ ಸಮಾರಂಭದಲ್ಲಿ ಇಲ್ಲಿನ ಶ್ರೀ ರಾಘವೇಂದ್ರ ಎಂಟರ ಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಫ್ತುದಾರ ಪ್ರಶಸ್ತಿಯನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿ ಅಭಿನಂದಿಸಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು. ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.