2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಭಾಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರು 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕಳೆದ ವರ್ಷದಿಂದ ಆರಂಭಿಸಲಾದ ಈ ಪ್ರಶಸ್ತಿಗೆ ಕಳೆದ ಸಾಲಿನಲ್ಲಿ ಶಿಕಾರಿಪುರ ಶಾಸಕ ಬಿ.ಎಸ್. ​ಯಡಿಯೂರಪ್ಪ ಪಾತ್ರರಾಗಿದ್ದರು.
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಶಾಸಕ ಆರ್.ವಿ.ದೇಶಪಾಂಡೆಗೆ ಇಂದು ಪ್ರಶಸ್ತಿ ನೀಡಿ ಗೌರವಿಸಿದರು. 1947 ರಲ್ಲಿ ಜನಿಸಿದ 75 ವರ್ಷ ವಯಸ್ಸಿನ ಹಿರಿಯ ನಾಯಕ ದೇಶಪಾಂಡೆ ಅವರು ಎಸ್​ ಎಂ ಕೃಷ್ಣ ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ 13 ವರ್ಷಗಳ ಕಾಲ ಕೈಗಾರಿಕಾ ಸಚಿವರಾಗಿದ್ದ ಹೆಗ್ಗಳಿಕೆ ಹೊತ್ತಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಟ್ವಿಟ್‌ ಮಾಡಿ  ಅಭಿನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!