ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿನ್ನ ಹಾಗೂ ಬೆಳ್ಳಿಯ ದರ ಇಳಿಕೆಯಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 25ರಿಂದ 39 ರೂಗಳಷ್ಟು ಇಳಿಕೆ ಆಗಿದೆ. ವಿದೇಶಗಳ ವಿವಿಧ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ವಲ್ಪ ಕಡಿಮೆ ಆಗಿದೆ. ಹೆಚ್ಚಿನ ಕಡೆ ಯಥಾಸ್ಥಿತಿ ಇದೆ.
ಬೆಳ್ಳಿ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಬೆಂಗಳೂರಿನಲ್ಲಿ ಮಾತ್ರ 86 ರೂ ಇದ್ದ ಬೆಳ್ಳಿ ಬೆಲೆ 90 ರೂಗೆ ಏರಿದೆ. ಉಳಿದ ಕಡೆ 93 ಮತ್ತು 96 ರೂ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,000 ರುಪಾಯಿಯಲ್ಲಿ ಇದೆ.