ನೂತನ ಸಂಸದರಿಗೆ ಶುಭಹಾರೈಕೆ: 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಸಿಡಿಮಿಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತುಕತೆ ನಡೆಸಿದರು.

ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಸಭೆಯಲ್ಲಿಗೆದ್ದವರಿಗೆ ಅಭಿನಂದನೆ ಹಾಗೂ ಸೋತ ಅಭ್ಯರ್ಥಿಗಳಿಗೆ ರಾಹುಲ್ ಗಾಂಧಿ ಧೈರ್ಯ ಹೇಳಿದರು. ಬಳಿಕ ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಈ ವೇಳೆ ಗೆದ್ದವರಿಗೆ ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯಿರಿ. ಬೆಂಗಳೂರು, ದೆಹಲಿಯಲ್ಲೇ ಇರಬೇಡಿ. ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಿ. ನಾವು ನಿಮ್ಮ ಜತೆಗೆ ಇದ್ದೇವೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ. ಕಾರ್ಯಕರ್ತರ ವಿಶ್ವಾಸಗಳಿಸಿ, ಅದರಿಂದ ಮುಂದೆ ನಿಮಗೂ, ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ಸಭೆಯಲ್ಲಿ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆದೆ. ಲೀಡ್ ಕಡಿಮೆ ಕೊಟ್ಟ ಸಚಿವರ ಬಗ್ಗೆ ರಣದೀಪ್‌ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. ಈ ವೇಳೆ 18 ಸಚಿವರು ಲೀಡ್ ಕೊಡಿಸುವಲ್ಲಿ ವಿಫಲ‌ ಎಂದು ವರದಿಯಲ್ಲಿ ತಿಳಿಸಲಾಗಿದೆ. ತಮ್ಮ ಜಿಲ್ಲೆಯಲ್ಲಿ ಅಭ್ಯರ್ಥಿ ಗೆಲ್ಲಿಸುವುದರಲ್ಲೂ ವಿಫಲರಾಗಿದ್ದಕ್ಕೆ ಸಚಿವರ ವಿರುದ್ಧ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!