ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಶಾಹದೋಲ್ನಲ್ಲಿಂದು ಪ್ರಧಾನಿ ಮೋದಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಕಾಂಗ್ರೆಸ್ ಸೇರಿದಂತೆ ಕುಟುಂಬ-ಕೇಂದ್ರಿತ ರಾಜಕೀಯ ಪಕ್ಷಗಳು ನೀಡುತ್ತಿರುವ ನಕಲಿ ಗ್ಯಾರಂಟಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ನಕಲಿ ಗ್ಯಾರಂಟಿ ನೀಡುವ ಪಕ್ಷಗಳ ಬಗ್ಗೆ ಎಚ್ಚರದಿಂದಿರಿ. ಅಂತಹ ಜನರು ತಮ್ಮ ರಾಜಕೀಯವೇ ಗ್ಯಾರಂಟಿ ಇಲ್ಲದಿದ್ದರೂ ಗ್ಯಾರಂಟಿ ಯೋಜನೆಗಳನ್ನು ತರುವುದಾಗಿ ಹೇಳುತ್ತಿದ್ದಾರೆ ಎಂದರು.
ಆಸ್ಪತ್ರೆಗಳಲ್ಲಿ ಆಯುಷ್ಮನ್ ಭಾರತ್ ಕಾರ್ಡ್ ನಿಂದ ರೂ.5 ಲಕ್ಷ ವರೆಗಿನ ಚಿಕಿತ್ಸೆ ಗ್ಯಾರಂಟಿಯಾಗಿ ದೊರೆಯಲಿದೆ. ಇದು ಮೋದಿ ಗ್ಯಾರಂಟಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದೇಶದಲ್ಲಿ 3 ಕೋಟಿಗೂ ಅಧಿಕ ಜನರಿಗೆ ಡಿಜಿಟಲ್ ಆಯುಷ್ಮನ್ ಕಾರ್ಡ್ ವಿತರಣೆಯನ್ನು ಆರಂಭಿಸಿದ ಪ್ರಧಾನಿ, ರಾಣಿ ದುರ್ಗಾವತಿ ಅವರ 500ನೇ ಜನ್ಮ ದಿನಾಚರಣೆಯನ್ನು ಭಾರತದಾದ್ಯಂತ ಆಚರಿಸಲಾಗುವುದು, ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಘೋಷಿಸಿದರು.