ಹೊಸದಿಗಂತ ಡಿಜಿಟಲ್ ಡೆಸ್ಕ್
ವಿದೇಶದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಲ್ವರಿಗೆ ಕೊವಿಡ್ ಸೋಂಕು ತಗುಲಿರುವುದು ದೃಢ ಪಟ್ಟಿದೆ.
ವಿದೇಶದಿಂದ ಬಂದಿದ್ದ 119 ಪ್ರಯಾಣಿಕರಿಗೆ ಸೋಮವಾರ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ನಾಲ್ವರು ಸೋಂಕಿತರಿಗೆ ವೈದ್ಯರು ಐಸೋಲೇಷನ್ ಗೆ ಸೂಚಿಸಿದ್ದಾರೆ. ಈ ಮೂಲಕ ವಿದೇಶದಿಂದ ಮರಳಿದ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ