Corona update | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ ನಾಲ್ಕು ಹೊಸ ಕೇಸ್ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ವಿದೇಶದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಲ್ವರಿಗೆ ಕೊವಿಡ್ ಸೋಂಕು ತಗುಲಿರುವುದು ದೃಢ ಪಟ್ಟಿದೆ.
ವಿದೇಶದಿಂದ ಬಂದಿದ್ದ 119 ಪ್ರಯಾಣಿಕರಿಗೆ ಸೋಮವಾರ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ನಾಲ್ವರಿಗೆ ಕೊರೊನಾ ಪಾಸಿಟಿವ್​ ಬಂದಿದೆ. ಸದ್ಯ ನಾಲ್ವರು ಸೋಂಕಿತರಿಗೆ ವೈದ್ಯರು ಐಸೋಲೇಷನ್ ಗೆ ಸೂಚಿಸಿದ್ದಾರೆ. ಈ ಮೂಲಕ ವಿದೇಶದಿಂದ ಮರಳಿದ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!