March 12, 2026
Thursday, March 12, 2026
spot_img

ಭದ್ರಾ ಮೇಲ್ದಂಡೆ ಯೋಜನೆ | ಅನುದಾನ ಶೀಘ್ರ ಬಿಡುಗಡೆಗೆ ಗೋವಿಂದ ಕಾರಜೋಳ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಭೇಟಿಯಲ್ಲಿ, ಕರ್ನಾಟಕದ ರೈತರು ಎದುರಿಸುತ್ತಿರುವ ನೀರಾವರಿ ತೊಂದರೆಗಳ ಕುರಿತು ಚರ್ಚೆ ನಡೆಸಲಾಗಿದೆ. ಯೋಜನೆಗೆ ಸಂಬಂಧಿಸಿದ ಪರಿಷ್ಕೃತ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ದೊರಕುವಂತೆ ಪ್ರಯತ್ನಿಸಲಾಗುವುದು ಎಂದು ಕಾರಜೋಳ ಹೇಳಿದ್ದಾರೆ.

ಇದನ್ನೂ ಓದಿ:

ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಕೂಡ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ವಿವರವಾಗಿ ತಿಳಿಸಿದ ವೇಳೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು 21,167 ಕೋಟಿ ರೂಪಾಯಿಗಳ ಪರಿಷ್ಕೃತ ಯೋಜನಾ ವರದಿಯನ್ನು ಸಲ್ಲಿಸಿದ್ದು, ಈಗಾಗಲೇ 10,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಉಳಿದ ಮೊತ್ತದಲ್ಲಿ ಕೇಂದ್ರದಿಂದ ಹೆಚ್ಚಿನ ನೆರವು ದೊರೆಯಬೇಕು ಎಂಬುದು ರಾಜ್ಯದ ಬೇಡಿಕೆಯಾಗಿದೆ. ಪ್ರಧಾನಿ ಭೇಟಿ ಬಳಿಕ ಅನುದಾನ ಬಿಡುಗಡೆಯ ಕುರಿತು ನಿರೀಕ್ಷೆ ಹೆಚ್ಚಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !