spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ ಭದ್ರಾ ನೀರು ಹರಿಸಬೇಕು: ಶಾಸಕ ಜಿ. ಎಚ್. ತಿಪ್ಪಾರೆಡ್ಡಿ ಸೂಚನೆ

- Advertisement -Nitte

ಹೊಸ ದಿಗಂತ ವರದಿ, ಚಿತ್ರದುರ್ಗ:

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರ ಮನವೊಲಿಸಿ ಭೂಸ್ವಾಧೀನ ಮಾಡಬೇಕು. ಅಲ್ಲದೇ ಕಾಲಮಿತಿಯಲ್ಲಿ ಭದ್ರಾ ನೀರು ಹರಿಸಿ ರೈತರ ಕಷ್ಟಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವೇಶ್ವರಯ್ಯ ಜಲ ನಿಗಮ, ಲೋಕೋಪಯೋಗಿ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳ ಜೊತೆ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭದ್ರಾ ಕಾಮಗಾರಿ ನಡೆಯುತ್ತಿರುವ ನನ್ನ ಕ್ಷೇತ್ರದಲ್ಲಿ ಬಹುತೇಕ ಭೂ ಸ್ವಾಧೀನ ಕಾರ್ಯ ಪೂರ್ಣಗೊಂಡಿದೆ. ಇನ್ನೂ ಏನಾದರೂ ಅಡೆತಡೆಗಳಿದ್ದರೆ ರೈತರಿಗೆ ತಿಳಿಹೇಳಿ ಭೂಮಿ ಕೊಡಿಸುತ್ತೇನೆ. ಆದರೆ ಅಧಿಕಾರಿಗಳು ಕಾಲ ಮಿತಿಯಲ್ಲಿ ಕಾಮಗಾರಿ ಮುಗಿಸಿ ಭದ್ರಾ ನೀರು ಹರಿಸಬೇಕೆಂದು ಹೇಳಿದರು.
ಚಿತ್ರದುರ್ಗ ಕ್ಷೇತ್ರ ಹೊರತುಪಡಿಸಿ ಇತರೆ ಭಾಗಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ತುಂಬಾ ವಿಳಂಬವಾಗುತ್ತಿದೆ. ಈ ರೀತಿಯಾದರೆ ಇನ್ನೂ ೧೦ ವರ್ಷಗಳಾದರೂ ಭದ್ರಾ ನೀರು ಹರಿಸಲು ಸಾಧ್ಯವಾಗದು. ಹಾಗಾಗಿ ಅಧಿಕಾರಿಗಳು ಈ ಕುರಿತು ಗಮನ ನೀಡಬೇಕು. ರೈತರ ಜೊತೆ ಮಾತುಕತೆ ನಡೆಸಿ ಸಾಧ್ಯವಾದಷ್ಟು ಬೇಗ ಭೂಸ್ವಾಧೀನ ಮಾಡಿಕೊಳ್ಳಬೇಕು. ತ್ವರಿತವಾಗಿ ಯೋಜನೆ ಕಾಮಗಾರಿ ನಡೆಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಭದ್ರಾ ಮೇಲ್ದಂಡೆ ಅನುಷ್ಠಾನಾಧಿಕಾರಿ ಶ್ರೀಧರ್ ಮಾತನಾಡಿ, ಈಗಾಗಲೇ ಪೈಪ್ ಲೈನ್ ಮೂಲಕ ರೈತರಿಗೆ ಹನಿ ನೀರಾವರಿ ಸೌಲಭ್ಯ ಕಲ್ಪಿಸಲು ಭೂ ಸರ್ವೆ ಕಾರ್ಯ ಮಾಡಲಾಗುತ್ತಿದೆ. ಕಾಲುವೆಯ ಬಲಭಾಗದ ಎಲ್ಲ ಭೂಮಿಗೆ ನೀರು ನೀಡಲಾಗುತ್ತದೆ. ೧೨೫೦ ಹೆಕ್ಟೇರ್ ಪ್ರದೇಶ ಮತ್ತು ೫೦೦ ಹೆಕ್ಟೇರ್ ಪ್ರದೇಶಕ್ಕೆ ಆಗುವಷ್ಟು ದೊಡ್ಡ ತೊಟ್ಟಿ ನಿರ್ಮಾಣ ಮಾಡಿ ಆ ತೊಟ್ಟಿಯಲ್ಲಿ ಮೋಟರ್ ಪಂಪ್ ಇಳಿಸಿ ರೈತರ ಜಮೀನುಗಳಿಗೆ ಪಂಪ್ ಮಾಡಲಾಗುವುದು ಎಂದರು. ಹಿರಿಯೂರು ತಾಲೂಕಿನ ಕೆಲವು ಸೇರಿದಂತೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕೆಂದು ಶಾಸಕ ತಿಪ್ಪಾರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಚಿತ್ರದುರ್ಗ ನಗರ ಸೇರಿದಂತೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೩೦೦-೪೦೦ ಕೋಟಿ ರೂ.ಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದೆ. ರಸ್ತೆ ಅಲೀಕರಣ, ಅಭಿವೃದ್ಧಿ ಕಾರ್ಯ ಮಾಡುತ್ತಿರುವುದರಿಂದ ಓಡಾಟಕ್ಕೆ ಸ್ವಲ್ಪ ತೊಂದರೆಯಾಗಲಿದೆ. ಮಾರ್ಚ್ ಅಂತ್ಯದೊಳಗೆ ಬಹುತೇಕ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳಲಿದೆ. ದಯವಿಟ್ಟು ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕರು ಮನವಿ ಮಾಡಿದರು.
ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಲೋಕೋಪಯೋಗಿ, ನಗರಸಭೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಬೇಕು., ಸಾಧ್ಯವಾದಷ್ಟು ಅಗಲವಾದ ರಸ್ತೆಗಳ ನಿರ್ಮಾಣ ಮಾಡಬೇಕು. ಅಲ್ಲದೆ ಹೈ ಮಾಸ್ಟ್ ಲೈಟ್ ಗಳ ಅಳವಡಿಕೆ ಕಾರ್ಯವೂ ಜೊತೆಯಲ್ಲೇ ನಡೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಳೆ ರಸ್ತೆ ಇರುವ ಕಡೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಬಿ.ಡಿ. ರಸ್ತೆಯ ಕೆಲವು ವರ್ತಕರು ಈಗಾಗಲೇ ೪ ರಿಂದ ೬ ಅಡಿಗಳಷ್ಟು ಜಾಗ ಬಿಟ್ಟು ಕೊಡುವುದಾಗಿ ಭರವಸೆ ನೀಡಿದ್ದಾರೆ. ಸುಮಾರು ೪೦ ಮಂದಿ ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಈ ಎಲ್ಲ ತಡೆಯಾಜ್ಞೆ ತೆರವುಗೊಳಿಸಿ ನ್ಯಾಯಾಲಯದ ಅನುಮತಿ ಪಡೆದು, ಒತ್ತುವರಿ ತೆರವುಗೊಳಿಸಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.
ಸಭೆಯಲ್ಲಿ ವಿಶ್ವೇಶ್ವರಯ್ಯ ಜಲ ನಿಗಮ, ಲೋಕೋಪಯೋಗಿ ಇಲಾಖೆ ಹಾಗೂ ನಗರಸಭೆಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss