Tuesday, March 21, 2023

Latest Posts

ಭದ್ರಾವತಿ ‘VISL’ ಕಾರ್ಖಾನೆ ಮುಚ್ಚುತ್ತೇವೆ : ಕೇಂದ್ರ ಸರ್ಕಾರದಿಂದ ಅಧಿಕೃತ ಉತ್ತರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭದ್ರಾವತಿ ‘VISL’ ಕಾರ್ಖಾನೆ ಮುಚ್ಚುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದ್ದೇವೆ ಎಂದು ಮೋದಿ ಸರ್ಕಾರ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಕರ್ನಾಟಕ ಮೂಲದ ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.

‘ಇಂದು ರಾಜ್ಯಸಭೆಯಲ್ಲಿ ಸರ್ಕಾರ ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಒಪ್ಪಿಕೊಂಡಿದೆ. ಕಾರ್ಖಾನೆಗೆ ಕಬ್ಬಿಣದ ಅದಿರಿನ ಮೂಲ ಇಲ್ಲಾ ಎಂಬ ಕಾರಣ ನೀಡಿ ಮುಚ್ಚಲಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ SAILಗೆ ಗಣಿ ಇಲ್ಲಾ ಎಂಬುದು ಆಶ್ಚರ್ಯಕರ’ ಎಂದು ಟ್ವೀಟ್ ಮಾಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!