Friday, February 3, 2023

Latest Posts

ಮಹಾರಾಷ್ಟ್ರ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಭಗತ್ ಸಿಂಗ್ ಕೋಶಿಯಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಲು ಮುಂದಾಗಿದ್ದಾರೆ.

ಈ ಕುರಿತಾಗಿ ಸ್ವತಃ ಭಗತ್‌ ಸಿಂಗ್‌ ಕೋಶಿಯಾರಿ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಎಲ್ಲಾ ರಾಜಕೀಯ ಜವಾಬ್ದಾರಿಗಳನ್ನು ಬಿಟ್ಟುಬಿಡಲು ನಿರ್ಧಾರ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಯಕೆಯನ್ನು ವ್ಯಕ್ತಪಡಿಸಿದ್ದೇನೆ’ ಎಂದು ಹೇಳಿದ್ದಾರೆ.

ರಾಜಭವನ ಹೊರಡಿಸಿದ ಹೇಳಿಕೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದ್ದು, ಭಗತ್​ಸಿಂಗ್​ ಕೋಶ್ಯಾರಿ ಅವರು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯಲು ಇಚ್ಚಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ತಮ್ಮ ನಿರ್ಧಾರವನ್ನು ತಿಳಿಸಿದ್ದರು. ರಾಜ್ಯಪಾಲ ಕೋಶ್ಯಾರಿ ಅವರು ತಮ್ಮ ಉಳಿದ ಜೀವನವನ್ನು ಓದು, ಬರವಣಿಗೆ ಮತ್ತು ಇತರ ಚಟುವಟಿಕೆಗಳಲ್ಲಿ ಕಳೆಯುವ ಬಯಕೆಯನ್ನು ಹೊಂದಿದ್ದಾರೆ. ಹೀಗಾಗಿ ಅವರು ಪ್ರಸ್ತುತ ಹೊಣೆಗಾರಿಕೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾಗಿ ರಾಜಭವನದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!