ಭಗವದ್ಗೀತೆ ಸರ್ವ ಕಾಲಕ್ಕೂ ಶ್ರೇಷ್ಠ ಗ್ರಂಥ: ಕೇಂದ್ರ ಸಚಿವ ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರಿನ ವಸಂತಪುರದ ಇಸ್ಕಾನ್​ನ ಶ್ರೀ ರಾಜಾಧಿರಾಜ ಗೋವಿಂದ ಮಂದಿರದಲ್ಲಿ ಗೀತ ಜಯಂತಿಯ ಸಂದರ್ಭದಲ್ಲಿ ಏರ್ಪಡಿಸಲಾದ ‘ಗೀತ ದಾನ ಯಜ್ಞ ಮಹೋತ್ಸವ’ ವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಸತ್ಯ, ಧರ್ಮ, ಅಹಿಂಸೆಯನ್ನು ಪ್ರತಿಪಾದಿಸುವ ಭಗವದ್ಗೀತೆ ಸರ್ವ ಕಾಲಕ್ಕೂ ಶ್ರೇಷ್ಠ ಗ್ರಂಥವಾಗಿದೆ ಎಂದು ತಿಳಿಸಿದರು. ನಾವು ಯಾವುದೇ ಪಠ್ಯ ಕಲಿಯಲು ಶಿಕ್ಷಕರ ಅವಶ್ಯಕತೆ ಇರುತ್ತದೆ. ಆದರೆ ಭಾವನೆಗಳಾದ ಶಾಂತ, ಕ್ರೌರ್ಯ, ಸಂತಸ, ದುಃಖ ಮುಂತಾದವುಗಳನ್ನು ಯಾರೂ ಕಲಿಸಿಲ್ಲ. ಇದು ನಮ್ಮಲ್ಲಿಯೇ ಪ್ರಕಟಗೊಳ್ಳುತ್ತದೆ ಎಂದರು.

ಭಗವದ್ಗೀತೆ ನಮ್ಮ ಜೀವನಕ್ಕೆ ಹತ್ತಿರವಾದದ್ದು. ನಾವು ಹೇಗೆ ಶೋಕದಿಂದ ಮುಕ್ತವಾಗಬಹುದೆಂದು ತಿಳಿಸಿಕೊಡುತ್ತದೆ. ಹಾಗೆಯೇ ಮೃತ್ಯುವಿನ ಭಯವನ್ನು ಹೋಗಲಾಡಿಸುತ್ತದೆ. ನಮ್ಮನ್ನು ಆಧ್ಯಾತ್ಮಿಕದ ಕಡೆ ಕರೆದೊಯ್ಯುತ್ತದೆ ಎಂದರು.

ಮಹಾಕವಿ, ಸಾಧಕರಿಗೆ ಇದು ಪ್ರೇರಣಾ ಶಕ್ತಿ. ಭಗವದ್ಗೀತೆಯ ನೀತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸರಿಯಾದ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ನಾವು ಎಂದಿಗೂ ಸಕಾರಾತ್ಮಕವಾಗಿ ಆಲೋಚನೆ ಮಾಡಿ ಒಳ್ಳೆಯ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಅದೇ ತರನಾದ ಜೀವನ ಶೈಲಿಯನ್ನು ಮುಂದಿನ ಯುವ ಪೀಳಿಗೆಗೂ ತಲುಪಿಸಬೇಕು ಎಂದು ಹೇಳಿದರು.

ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಸ್ಕಾನ್ ಅಕ್ಷಯ ಪಾತ್ರೆ ಅಧ್ಯಕ್ಷರಾದ ಮಧುಪಂಡಿತ್ ದಾಸ್, ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ಚಿ ಸೂರ್ಯ, ಶಾಸಕ ಎಂ‌. ಕೃಷ್ಣಪ್ಪ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!