ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ನಲ್ಲಿ 92 ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲು ಮಾಡುವ ಮೂಲಕ ನೂತನ ಸರ್ಕಾರ ರಚನೆ ಮಾಡಲು ಸಿದ್ಧವಾಗುತ್ತಿರುವ ಆಪ್ ನ ನಿಯೋಜಿತ ಸಿಎಂ ಭಗವಂತ್ ಮನ್ ಮಾ.16ರಂದು ಪದಗ್ರಹಣಕ್ಕೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ.
ದೆಹಲಿಯಲ್ಲಿಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಷ್ ಸಿಸೋಡಿಯಾ ಅವರನ್ನು ಭೇಟಿ ಮಾಡಿರುವ ಭಗವಂತ್ ಮನ್ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಮಾರ್ಚ್ 13ರಂದು ಅಮೃತಸರದಲ್ಲಿ ಬೃಹತ್ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಇದರಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.