ಮಾರ್ಚ್​​ 16ರಂದು ಪಂಜಾಬ್​ ಮುಖ್ಯಮಂತ್ರಿ ಆಗಿ ಪದಗ್ರಹಣ: ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಭಗವಂತ್ ಮಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಂಜಾಬ್​ನ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್​​ ತಮ್ಮ ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಂಜಾಬಿನ ವಿಧಾನ ಸಭೆ ಚುನಾವಣೆಯಲ್ಲಿ ಭಗವಂತ್ ಮಾನ್ ಅಮೋಘ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ ಇಂದು ಲೋಕಸಭಾ ಸಭಾಪತಿ ಓಂ ಬಿರ್ಲಾ ಅವರನ್ನ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕಳೆದ ಎರಡು ಅವಧಿಗೆ ಸಂಗ್ರೂರ್​​​ ಸಂಸದೀಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಮಾರ್ಚ್​​ 16ರಂದು ಪಂಜಾಬ್​ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲಿದ್ದು, ಹೀಗಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಸದನವನ್ನು ಕಳೆದುಕೊಳ್ಳಲಿದ್ದೇನೆ. ಪಂಜಾಬ್​​​ನ ಜನತೆ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಆದರೆ, ಶೀಘ್ರದಲ್ಲೇ ಸದನದಲ್ಲಿ ದಿಟ್ಟ ಧ್ವನಿ ಪ್ರತಿಧ್ವನಿಸಲಿದೆ ಎಂಬ ಭರವಸೆಯನ್ನ ಸಂಗ್ರೂರ್​ ಜನರಿಗೆ ನೀಡುತ್ತೇನೆ. ನಿಮ್ಮ ಮಗನನ್ನು ನಂಬಿ ಮತ ಹಾಕಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!