ನವರಾತ್ರಿ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ ಮನೆಗೆ ಬಂದ ಭಾಗ್ಯಲಕ್ಷ್ಮಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ ಮನೆಯಲ್ಲಿ ಸಂಭ್ರಮ ಮನೆಮಾಡಿದ್ದು, ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ನಿನ್ನೆ ಆಸ್ಪತ್ರೆಗೆ ದಾಖಲಾಗಿ ಸಹಜ ಹೆರಿಗೆ ಮೂಲಕ ಮಗುವಿಗೆ ಜನ್ಮ ನೀಡಿದ್ದಾರೆ.
ಇತ್ತೀಚೆಗೆ ಸೀಮಂತ ಕಾರ್ಯಕ್ರಮ ಕೂಡ ನಡೆದಿತ್ತು. ಇನ್ನು, ತಮಗೆ ಹೆಣ್ಣು ಮಗು ಬೇಕೆಂದು ಈ ದಂಪತಿ ತಮ್ಮ ಆಸೆ ವ್ಯಕ್ತಪಡಿಸಿದ್ದರು. ಅದರಂತೆ ಇದೀಗ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.

24 ನವೆಂಬರ್ 2019ರಲ್ಲಿ ವೈವಾಹಿಕ ಜೀವನಕ್ಕೆ ಹೆಜ್ಜೆಯಿಟ್ಟರು. ಇಂದು ಮನೆಗೆ ಹೊಸ ಅತಿಥಿಯ ಆಗಮನ ಆಗುತ್ತಿದ್ದು, ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!