ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈರತಿ ಸುರೇಶ್ ರಿಯಲ್ ಎಸ್ಟೇಟ್ ಗಿರಾಕಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಹಗರಣ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಹೆಲಿಕಾಪ್ಟರ್ ನಲ್ಲಿ ಆಗಮಿಸಿ ಪೊಲೀಸ್ ರಕ್ಷಣೆಯಲ್ಲಿ ಸಭೆ ನಡೆಸಿ ಹೋಗ್ತಾರೆ. ಭೇಟಿಯಾದ ನಂತರ ಅದು ಮಾಡಿದ್ದೇನೆ, ಇದನ್ನು ಮಾಡಿದ್ದೀನಿ ಎಂದು ಹೇಳುತ್ತಾರೆ. ನೀವು ಒಂದಕ್ಕಾದ್ರೂ ಆದೇಶ ಬಂದಿದ್ಯಾ? ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕೇವಲ ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ