ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯಾಪತಿ ಶ್ರೀರಾಮಚಂದ್ರನ ಮುಖಾರವಿಂದ ಕಾಣಲು ಭಕ್ತರು ಉತ್ಸುಕರಾಗಿದ್ದಾರೆ. ಮೊದಲನೇ ದಿನವೇ ಮೂರು ಲಕ್ಷಕ್ಕೂ ಹೆಚ್ಚು ಭಕ್ತರು ರಾಮಲಲಾ ದರುಶನ ಪಡೆದಿದ್ದಾರೆ.
ಲಕ್ಷಾಂತರ ಭಕ್ತರು ಒಂದೇ ಸಮಯಕ್ಕೆ ಆಗಮಿಸಿದ್ದು, ಅವರನ್ನು ನಿಯಂತ್ರಣ ಕಷ್ಟಸಾಧ್ಯವಾಗಿತ್ತು. ಇಂದು ಕೂಡ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಹೈ ಸೆಕ್ಯುರಿಟಿ ನೀಡಲಾಗಿದೆ.
ಇಂದು ಮುಂಜಾನೆ ಮೂರು ಗಂಟೆಯಿಂದಲೇ ದೇಗುಲದ ಮುಂದೆ ಜನರು ಹಾಜರಾಗಿದ್ದು, ದರುಶನಕ್ಕೆ ದೇಗುಲದ ಬಾಗಿಲು ತೆರೆದಾಗ ನೂಕು ನುಗ್ಗಲು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಭಕ್ತರಿಗೆ ಮೆಟಲ್ ಡಿಕೆಟ್ಕರ್ ಮೂಲಕ ಪರಿಶೀಲನೆ ಮಾಡಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.