April 11, 2026
Saturday, April 11, 2026
spot_img

ಕಾರ್ಮಿಕ ಸಂಘಟನೆಗಳಿಂದ ಇಂದು ‘ಭಾರತ್ ಬಂದ್’ ಕಿಚ್ಚು: ರಾಜ್ಯದಲ್ಲಿ ಜನಜೀವನ ಹೇಗಿರಲಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಇಂದು ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ‘ಭಾರತ್ ಬಂದ್’ಗೆ ಕರೆ ನೀಡಿವೆ. ಈ ಹೋರಾಟಕ್ಕೆ ರೈತ ಸಂಘಟನೆಗಳು ಸಾಥ್ ನೀಡಿದ್ದು, ರಾಜ್ಯದಲ್ಲೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ಆದರೆ, ಸಾರ್ವಜನಿಕ ಸೇವೆಗಳಲ್ಲಿ ದೊಡ್ಡ ಮಟ್ಟದ ವ್ಯತ್ಯಯವಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಒಟ್ಟು 10 ಪ್ರಮುಖ ಕೇಂದ್ರ ಕಾರ್ಮಿಕ ಸಂಘಟನೆಗಳು ಈ ಹೋರಾಟದ ನೇತೃತ್ವ ವಹಿಸಿವೆ. ಇವರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಅಖಿಲ ಭಾರತ ಕಿಸಾನ್ ಸಭಾ ಸಂಪೂರ್ಣ ಬೆಂಬಲ ಘೋಷಿಸಿವೆ.

ಬಂದ್ ವೇಳೆ ಏನಿರುತ್ತೆ?

ಬಸ್ & ರೈಲು ಸಾರಿಗೆ ವ್ಯವಸ್ಥೆ ಎಂದಿನಂತೆ ಇರಲಿದೆ.
ಆಟೋ & ಕ್ಯಾಬ್ ಸಂಚಾರ ಲಭ್ಯವಿರುತ್ತದೆ, ಆದರೆ ಕೆಲವು ಸಂಘಟನೆಗಳ ಬೆಂಬಲ ಇರಬಹುದು.
ನಮ್ಮ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟುಗಳು ಸಹಜವಾಗಿ ನಡೆಯಲಿವೆ.
ಶಾಲೆ & ಕಾಲೇಜು ರಜೆ ಘೋಷಿಸಿಲ್ಲ, ಶೈಕ್ಷಣಿಕ ಚಟುವಟಿಕೆಗಳು ಮುಂದುವರಿಯಲಿವೆ.

ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗಿರಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್‌ನಿಂದ ಕಾರ್ಮಿಕ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿವೆ. ಹೀಗಾಗಿ ನಗರದ ಕೆಲವೆಡೆ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !